Wednesday, March 11, 2026

spot_img

90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳೊಳಗೆ ಅದನ್ನು ಭರ್ತಿ ಮಾಡುವಂತೆ ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಜೆಟ್ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ವೇಳೆ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಆ ಊರಿನವರು ಲಭ್ಯವಿಲ್ಲದಿದ್ದರೆ ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿರುವವರನ್ನೂ ಪರಿಗಣಿಸಲಾಗುತ್ತದೆ ಎಂದು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಇದರಲ್ಲಿ 16 ಕಾರ್ಯಕರ್ತೆ ಹಾಗೂ 131 ಸಹಾಯಕಿ ಹುದ್ದೆಗಳ ಆನ್‌ಲೈನ್ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ ಎಂದು ಸಚಿವೆ ಮಾಹಿತಿ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles