Thursday, March 5, 2026

spot_img

ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

ಮಂಗಳೂರು

   ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

  ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

  ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

   ಬ್ಯಾಂಕ್​ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್​ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್​, ಗನ್​ನಿಂದ ಬೆದರಿಸಿ ಬ್ಯಾಂಕ್​ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

   ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles