Tuesday, March 3, 2026

spot_img

ಕಾರಿಗೆ ಲಾರಿ ಡಿಕ್ಕಿ : ಮೂವರ ದುರ್ಮರಣ

ಕಲಬುರಗಿ:

    ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 40 ವರ್ಷದ ಸಂಜೀವ್, 26 ವರ್ಷದ ಅಭಿಷೇಕ್ ಮತ್ತು 24 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.

   ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles