Monday, June 30, 2025

spot_img

ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ

ಬೆಂಗಳೂರು

      ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ  ಸುಮಾರು 25 ರಿಂದ 30 ಅಡಿ ಕೆಳಗೆ ಜಿಗಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್​ನಿಂದ ಮಲ್ಲೇಶ್ವರಂ ಕಡೆ ತೆರಳುವ ಮಾರ್ಗದಲ್ಲಿ ಸಂಭವಿಸಿದೆ. ರೈಲಿನಿಂದ ಕೆಳಗೆ ಬಿದ್ದ ರಭಸಕ್ಕೆ ವ್ಯಕ್ತಿಯ ಸೊಂಟ, ಬಲಭಾಗದ ಕಾಲಿಗೆ ತೀವ್ರ ಗಾಯಗಳಾಗಿದೆ. ಕುಡಿದ ಅಮಲಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಕೆಳಕ್ಕೆ ಜಿಗಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿಯ ಹೆಸರು, ವಿಳಾಸ ಪತ್ತೆ ಹಚ್ಚುತ್ತಿದ್ದಾರೆ. ಶೇಷಾದ್ರಿಪುಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles