ಉಡುಪಿ
ಪದ್ಮಶ್ರೀ ಡಾ ಟಿ. ಎಂ. ಎ . ಪೈ ರಿಂದ ಸ್ಥಾಪಿತವಾಗಿ ಸುವರ್ಣ ಮಹೋತ್ಸವ ಹೊಸ್ತಿಲಲ್ಲಿರುವ ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜುಕೇಶನ್ (AGE) ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಘಟಕ ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಯ 9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ , ಪ್ರತಿಷ್ಠಿತ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರು (ICAI) ನಡೆಸಿದ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಅಖಿಲ ಭಾರತೀಯ 12ನೇ ರ್ಯಾಂಕ್ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯನ್ನು ಸಂಸತ್ ಅಧಿನಿಯಮದ ಮೂಲಕ ಸ್ಥಾಪಿತವಾದ ಕಾನೂನುಬದ್ಧ ಸಂಸ್ಥೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಕಾಯ್ದೆ, 1949 (ಕಾಯ್ದೆ ಸಂಖ್ಯೆ XXXVIII of 1949) ಅಡಿಯಲ್ಲಿ ಸ್ಥಾಪಿತವಾದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಯ ಉದ್ಯೋಗ ಮಾರ್ಗದರ್ಶನ ಸಮಿತಿ (CCC) ಆಯೋಜಿಸಿತ್ತು. ಈ ಸಾಧನೆಯ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋದ ಶೆಟ್ಟಿ , ಶಾಲಾ ಆಡಳಿತ ಮಂಡಳಿ, ಮಣಿಪಾಲದ AGE ಶಿಕ್ಷಣ ಸಂಸ್ಥೆಗಳು, ಶಾಲಾ ಪೋಷಕರ ಮತ್ತು ಶಿಕ್ಷಕರ ಸಂಘ (PTA), ಹಳೆ ವಿದ್ಯಾರ್ಥಿ ಸಂಘಟನೆ, ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೀಪೇಶ್ಗೆ ಹೃದಯಪೂರ್ವಕ ಅಭಿನಂದನೆಗಳು ತಿಳಿಸಿ, ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದ್ದಾರೆ.