Thursday, October 23, 2025

spot_img

ಬದಲಾದ ಸಂವಿಧಾನವನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ: ಕೆ.ಜಯಪ್ರಕಾಶ ಹೆಗ್ಡೆ


ಉಡುಪಿ: ಗಾಂಧಿ ಭಾರತ ಹಿರಿಯಡ್ಕ ಇದರ ಆಶ್ರಯದಲ್ಲಿ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧೈಯವಾಕ್ಯದಡಿ ಹಿರಿಯಡಕದ ಶ್ರೀವೀರಭದ್ರ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಲಾದ ಗಾಂಧಿ ಭಾರತ ಬೃಹತ್ ಸಮಾವೇಶ ಚರಕವನ್ನು ತಿರುಗಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ, ಇತಿಹಾಸವನ್ನೇ ತಿಳಿದುಕೊಳ್ಳದವರು ಇಂದು ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ. ಇವರು ಯಾರು ಕೂಡ ಸಂವಿಧಾನ ವನ್ನು ಓದಿಯೇ ಇಲ್ಲ. ಬದಲಾದ ಸಂವಿಧಾನವನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ. ನಮ ಸಂವಿಧಾನ ಜನರಿಗೆ ನೀಡುವ ಗೌರವ ಬೇರೆ ಯಾವ ದಿ ಸಂವಿಧಾನ ನೀಡಲು ಅಸಾಧ್ಯ ಎಂದರು.

ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯವಾಗುತ್ತದೆ. ಆದರೆ ಈ ಸಂವಿಧಾನ ವನ್ನು ದುರ್ಬಲಗೊಳಿಸಲು ಅನೇಕ ಪ್ರಯತ್ನಗಳು ಇಂದು ನಡೆಯುತ್ತಿವೆ. ಮನು ಸಂವಿಧಾನವನ್ನು ಮತ್ತೆ ತರಲು ಹೊರಟಿದ್ದಾರೆ. ಅದರ ವಿರುದ್ಧ ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ ಆದುದರಿಂದ ಅಂಬೇಡ್ಕರ್ ಸಂವಿಧಾನವನ್ನು ನಮ್ಮ ಮಕ್ಕಳಿಗೆ ತಿಳಿಸಿ ಉಳಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದ್ದಾರೆ.

ವೇದಿಕೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ,ನ್ಯಾಯವಾದಿ ಸುಧೀರ್ ಮರೋಳಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ವರೋನಿಕಾ ಕರ್ನೆಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್, ನವೀನ ಚಂದ್ರ ಸುವರ್ಣ, ರಮೇಶ್ ಕಾಂಚನ್, ಮಲ್ಪೆ ರಾಘವೇಂದ್ರ, ಇಸ್ಮಾಯಿಲ್ ಆತ್ರಾಡಿ, ಸರ್ಫುದ್ದೀನ್ ಶೇಕ್ ಮೊದಲಾದವರು ಉಪಸ್ಥಿತರಿದ್ದರು. ಜಯಂತ ರಾವ್ ಸ್ವಾಗತಿಸಿದರು. ಸಮಾವೇಶದ ಸಂಚಾಲಕ ಉದ್ಯಾವರ ನಾಗೇಶ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles