Friday, June 27, 2025

spot_img

ಸಾಲದ ಬಜೆಟ್: ಮಂಜುನಾಥ್ ಭಂಡಾರಿ

ಉಡುಪಿ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವುದು “ಸಾಲದ ಬಜೆಟ್ ” ಆಗಿದೆ ಎಂದಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ. ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಪೂರಕವಾದ ಒಂದೇ ಒಂದು ಯೋಜನೆ ಆಯವ್ಯಯದಲ್ಲಿ ಇಲ್ಲ. ಕೇಂದ್ರ ಬಿಜೆಪಿ ಸರ್ಕಾರದ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಬಜೆಟ್ ನಲ್ಲಿ ಎಲ್ಲೂ ಪ್ರತಿಫಲಿಸಿಲ್ಲ. ಅದು ಕೇವಲ ಘೋಷಣೆಯಾಗೇ ಉಳಿದಿದೆ. ದೆಹಲಿ, ಬಿಹಾರ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಮಂಡಿಸಿದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿರೋಧ ಪಕ್ಷಗಳ ಸರ್ಕಾರ ಇರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ. ಅನ್ಯಾಯವಾಗಿದೆ. ಇದನ್ನು ವಿತ್ತ ಸಚಿವರು ಹಾಗೂ ಪ್ರಧಾನ ಮಂತ್ರಿಗಳು ಪುನರ್ ಪರಿಶೀಲನೆ ನಡೆಸಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles