Saturday, June 28, 2025

spot_img

ಆರೋಗ್ಯ ಇಲಾಖೆಗೆ 10 ಸೆಂಟ್ಸ್ ಜಾಗ ದಾನ

ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ವ್ಯಾಪ್ತಿಯ 92 ಹೇರೂರು ಉಪ ಆರೋಗ್ಯ ಕೇಂದ್ರಕ್ಕೆ ಗಣೇಶ್ ಬೋಜ ಕರ್ಕೇರ ಇವರು 10 ಸೆಂಟ್ಸ್ ಜಾಗವನ್ನು ದಾನವಾಗಿ ಆರೋಗ್ಯ ಇಲಾಖೆಗೆ ನೀಡಿರುತ್ತಾರೆ. ಇವರಿಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಳಿಯಾರಗೋಳಿ ವಾರ್ಡ್ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆಡಳಿತ ವೈದ್ಯಾಧಿಕಾರಿ ಡಾ.ರಾಜಶ್ರೀ, ವೈದ್ಯಾಧಿಕಾರಿ ಡಾ.ದೃತಿ.ವಿ.ಆಳ್ವ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಮಜೂರಿನ ಸಿಬ್ಬಂದಿ ವರ್ಗದವರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles