ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದುಇದರ ಬ್ರಹ್ಮಕಳಶೋತ್ಸವಕ್ಕೆ ಹರಿದ್ವಾರದಿಂದ ವಿಮಾನದ ಮೂಲಕ ಬಂದ ಪವಿತ್ರ ಗಂಗಾಜಲವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಗಣ್ಯರ ಮೂಲಕ ಸ್ವಾಗತಿಸಿದರು.