Saturday, July 5, 2025

spot_img

ಕೆ.ಎಸ್.ಆರ್.ಟಿ.ಸಿ ನಿಗಮದ ಉಡುಪಿ ಹಾಗೂ ಕುಂದಾಪುರ ವಿಭಾಗದ ಅಧಿಕಾರಿಗಳ ಸಭೆ


ಉಡುಪಿ : ಮಕ್ಕಳಿಗೆ ಶಿಕ್ಷಣ ಮೂಲಭೂತ ಹಕ್ಕು. ಕೇವಲ ಹಕ್ಕುಗಳನ್ನು ನೀಡಿದರೆ ಸಾಲದು, ಅದನ್ನು ಪಡೆಯಲು ಅಗತ್ಯವಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿದಾಗ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಹಿನ್ನೆಲೆಯಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಪಡೆದುಕೊಳ್ಳಲು ಸಾರಿಗೆ ವ್ಯವಸ್ಥೆ ಬಹುಮುಖ್ಯ ಪಾತ್ರವಹಿಸುತ್ತದೆ. ಆದರೆ ಇತ್ತೀಚೆಗೆ ಸಾರಿಗೆ ಸಂಬAಧಿತ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದು ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿ ಸ್ನೇಹಿ ಸಾರಿಗೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಅವರು ಇತ್ತೀಚೆಗೆ ನಗರದ ಒಳಕಾಡು ಸರಕಾರಿ ಸಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಹಾಗೂ ಕುಂದಾಪುರ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡುತ್ತಿದ್ದರು.
ಗ್ರಾಮೀಣ ಪ್ರದೇಶಗಳ ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಶಾಲಾ ಕಾಲೇಜುಗಳ ಸಮಯವನ್ನು ತಿಳಿದುಕೊಂಡು ಸದರಿ ಸಮಯಕ್ಕೆ ಸಾರಿಗೆಗಳನ್ನು ಕಾರ್ಯಾಚರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಯಾವುದೇ ಸಾರಿಗೆ ಸಂಬಂಧಿತ ವಿಷಯಕ್ಕೆ ಮನವಿಗಳು ಬಂದಲ್ಲಿ ಶೀಘ್ರದಲ್ಲಿ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಹೆಚ್ಚಿಗೆ ಸೇರುವ ಜಂಕ್ಷನ್‌ಗಳಲ್ಲಿ ಸಾರಿಗೆ ಸೇವೆಗಳ ಮೇಲ್ವಿಚಾರಣೆಗೆ ಸಂಚಾರ ನಿಯಂತ್ರಕರು ಅಥವಾ ಮೇಲ್ವಿಚಾರಕರನ್ನು ತಪ್ಪದೇ ನಿಯೋಜಿಸಿ, ಸುಗಮ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸಬೇಕು. ತಮ್ಮ ವಿಭಾಗದ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಾಯಾಣಿಸಲು ಅನುವಾಗಲು ನಿಗದಿತ ಬಸ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಿ ಅವರನ್ನು ಹತ್ತಿಸಿ
ಇಳಿಸಿಕೊಂಡು ಮುಂದೆ ಹೋಗುವುದರ ಜೊತೆಗೆ ವಿದ್ಯಾರ್ಥಿಗಳ ಜೊತೆಗೆ ಸೌಜನ್ಯಯುತವಾಗಿ ವರ್ತಿಸುವಂತೆ ತಿಳುವಳಿಕೆ ನೀಡಬೇಕು ಎಂದರು.
ಬಾಲಾ ನ್ಯಾಯ ಕಾಯಿದೆ ಮತು ಪೋಕ್ಸೋ ಕಾಯಿದೆ ಬಗ್ಗೆ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು. ಅತಿ ಹೆಚ್ಚಿನ ವಿದ್ಯಾರ್ಥಿಗಳು ನಿಂತು ಪ್ರಯಾಣಿಸುವ ಸರತಿಗಳ ಬಗ್ಗೆ ವಿಭಾಗ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಹೆಚ್ಚುವರಿ ಸರತಿಗಳನ್ನು ಅಳವಡಿಸುವ ಅವಶ್ಯಕತೆ ಬಗ್ಗೆ ಪರಿಶೀಲಿಸಿ ಕ್ರಮವಹಿಸಬೇಕು ಎಂದರು. ಪ್ರತೀ ಬಸ್ ನಿಲ್ದಾಣದಲ್ಲಿ ಹಾಗೂ ಬಸ್‌ಗಳಲ್ಲಿ ಮಕ್ಕಳ ಸಹಾಯವಾಣಿಯನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು. ಅಗತ್ಯವಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರವನ್ನು ಪಡೆದು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳ ಸ್ನೇಹಿಯಾದ ಸಾರಿಗೆ ಸೇವೆಯನ್ನು ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ, ಉಡುಪಿಯ ಸಂಚಾರ ನಿಯಂತ್ರಕರಾದ ದಿನೇಶ ಸಿ.ಕೆ, ಮುತ್ತಪ್ಪ, ಗಣಪತಿ ಪ್ರಭು ಹಾಗೂ ಅರುಣ್ ಕುಮಾರ್, ಘಟಕ ವ್ಯವಸ್ಥಾಪಕ ಅಶೋಕ ಹೆಗಡೆ, ಕುಂದಾಪುರದ ಸಂಚಾರ ನಿಯಂತ್ರಕರಾದ ಯಾದವ, ಶಂಕ್ರಪ್ಪ ದಾನಣ್ಣವರ ಹಾಗೂ ವಿಷ್ಣು ಪಟಗಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles