Sunday, July 6, 2025

spot_img

ಫೆ.28 ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ : ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಯೋಜನೆಯ ಸುಮಾರು ರೂ.25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ‘ದಲಿತ ದ್ರೋಹಿ’ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28 ಶುಕ್ರವಾರ ಬೆಳಿಗ್ಗೆ ಗಂಟೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ತಂಡದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಆಗ್ರಹ ಪತ್ರವನ್ನು ಸಲ್ಲಿಸಲಾಗುವುದು. ಈ ಮಹತ್ವದ ಜನಾಂದೋಲನದಲ್ಲಿ ರಾಜ್ಯ ತಂಡದ ಪ್ರಮುಖರಾದ ಸಂಸದ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕಿಶೋರ್ ಕುಮಾರ್ ಪುತ್ತೂರು, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಸಾಬು ದೊಡ್ಮನಿ, ಗೋಪಾಲ್ ಘಟ್ ಕಾಂಬಳೆ, ಮಾಜಿ ಶಾಸಕ ಹರ್ಷವರ್ಧನ್, ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಓದೋ ಗಂಗಪ್ಪ, ಸಂಯೋಜಕರಾದ ದೀಪಕ್ ದೊಡ್ಡಯ್ಯ, ದಿನಕರ ಬಾಬು, ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಕಾರ್ಯಕಾರಿಣಿ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles