ಉಡುಪಿ : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2023-24 ರ ಮುಂಗಾರು ಹಂಗಾಮಿನ ಬೆಳೆ ವಿಮೆ
ನೋಂದಣಿಯಾದ ಪ್ರಸ್ತಾವನೆಗಳನ್ನು, ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿದ ನಂತರ ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆ ಬಾರದಿರುವುದರಿಂದ ತಿರಸ್ಕರಿಸುತ್ತಾರೆ. ತಿರಸ್ಕೃತವಾದ ಬ್ರಹ್ಮಾವರದ 23 ಹಾಗೂ ಉಡುಪಿಯ 1 ಪ್ರಕರಣಗಳ ಪಟ್ಟಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಉಡುಪಿ, ರೈತ ಸಂಪರ್ಕ ಕೇಂದ್ರಗಳು ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್
ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ 15 ದಿನಗಳ ಒಳಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.