Sunday, June 29, 2025

spot_img

ಮಾ. 11 ರಂದು ಮಿನಿ ಉದ್ಯೋಗ ಮೇಳ

ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ
ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles