Sunday, March 16, 2025

spot_img

ಹ್ಯಾಚರಿಯಿಂದ 115 ಕಡಲಾಮೆ ಮರಿಗಳು ಕಡಲಿಗೆ…

ಬೈಂದೂರು : ನಶಿಸಿ ಹೋಗುವ ಹಂತದಲ್ಲಿರುವ ಕಡಲಾಮೆಗಳ ರಕ್ಷಣಾ ಕಾರ್ಯ ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಮರವಂತೆ ಹಾಗೂ ತಾರಾಪತಿಯಲ್ಲಿ ನಡೆಯುತ್ತಿದೆ. ಪ್ರತಿವರ್ಷವು ಕೂಡ ಕಡಲ ತೀರಕ್ಕೆ ಸಂತಾನೋತ್ಪತ್ತಿಗಾಗಿ ಬರುವ ಕಡಲಾಮೆಗಳಿಗೆ ಯಾವುದೇ ರಕ್ಷಣೆ ಇಲ್ಲದ ಕಾರಣ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ಸದ್ಯ ಸ್ಥಳೀಯ ಮೀನುಗಾರರು ಮತ್ತು ಇಲಾಖೆಯ ನೇತೃತ್ವದಲ್ಲಿ ಕಡಲಾಮೆ ರಕ್ಷಣಾ ಕಾರ್ಯ ಪ್ರತಿವರ್ಷವು ನಡೆಯುತ್ತಿದೆ. ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ್ದು ಅದರಲ್ಲಿ ಮರವಂತೆ ‘ಹ್ಯಾಚರಿ’ಯಲ್ಲಿ ಗುರುವಾರ ರಾತ್ರಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ.

ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ ಹಾಗೂ ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಹಿತ ಈ ಬಗ್ಗೆ ಮುತುವರ್ಜಿ ವಹಿಸಲು ಆಸಕ್ತ ಸಂಘ- ಸಂಸ್ಥೆಗಳಿಗೆ ಮಾಹಿತಿ ನೀಡಿದ್ದರು. ಅದರಂತೆ ಮರವಂತೆ ಹಾಗೂ ತಾರಾಪತಿಯಲ್ಲಿ ಪ್ರತ್ಯೇಕ 2 ಹ್ಯಾಚರಿ ನಿರ್ಮಿಸ ಲಾಗಿತ್ತು. ಗುರುವಾರ ರಾತ್ರಿ ಮರವಂತೆ ಹ್ಯಾಚರಿಗಳಿಂದ ಒಟ್ಟು 115 ಕಡಲಾಮೆ ಮರಿಗಳು ಹೊರಕ್ಕೆ ಬಂದಿದ್ದು ಹೊರಕ್ಕೆ ಬಂದ ಕಡಲಾಮೆ ಮರಿಗಳು ನೈಸರ್ಗಿಕವಾಗಿ ಕಡಲು ಸೇರಲು ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮೀನುಗಾರರು ಒಗ್ಗೂಡಿ ಅನುವು ಮಾಡಿಕೊಟ್ಟರು. ತಾರಾಪತಿಯ ಹ್ಯಾಚರಿಯಿಂದ ಮುಂದಿನ ವಾರದಲ್ಲಿ ಮರಿಗಳು ಬರುವ ನಿರೀಕ್ಷೆಯಿದೆ.

ಸಮುದ್ರದಿಂದ ಹೊರಬಂದು ದಡದಲ್ಲಿ ಕಡಲಾಮೆಗಳು ಮೊಟ್ಟೆಯಿಟ್ಟ 48-60 ದಿನದಲ್ಲಿ ಮರಿಗಳು ಹೊರಬರುತ್ತವೆ. ಮೊಟ್ಟೆಗಳ ಸಂರಕ್ಷಣೆ, ವೀಕ್ಷಣೆ ಹಾಗೂ ಅಂತಿಮ ಫಲಿತಾಂಶದ ನಿಟ್ಟಿನಲ್ಲಿ 40ಕ್ಕೂ ಅಧಿಕ ದಿನಗಳಿಂದ ಮುತುವರ್ಜಿ ವಹಿಸಿದ್ದು ಮಾತ್ರವಲ್ಲದೇ ಮರಿಯೊಡೆಯುವ ರಾತ್ರಿ ತನಕವೂ ನಿಗಾವಹಿಸಿದ್ದ ಅರಣ್ಯ ಇಲಾಖೆ, ಸ್ಥಳೀಯರ ಕಾರ್ಯ ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅಳಿವಿನಂಚಿನಲ್ಲಿರುವ ಕಡಲಾಮೆ ಮೊಟ್ಟೆಗಳನ್ನು ಅಲ್ಲಲ್ಲೇ ನೈಸರ್ಗಿಕವಾಗಿ ಹ್ಯಾಚರಿ ನಿರ್ಮಿಸುವ ಮೂಲಕ ಸಂರಕ್ಷಿಸಲಾಗಿತ್ತು. ಕಡಲಿನ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಅಳಿವಿನ ಅಂಚಲ್ಲಿರುವ ಕಡಲಾಮೆ ರಕ್ಷಣೆ ಆಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles