ಕಾಪು : ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (Additional Director General of Police, Karnataka) ಅರುಣ್ ಚಕ್ರವರ್ತಿ ಐಪಿಎಸ್ ಮತ್ತವರ ಪುತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಭೇಟಿ ನೀಡಿ, ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುಂದರ್ ಶೆಟ್ಟಿ ದೇವಳದ ಜಿರ್ಣೋದ್ಧಾರ ಸಾಗಿ ಬಂದ ಸವಿವರವಾದ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
