ಉಡುಪಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸಂಗಮ ಕಲಾವಿದೆರ್ ಮಣಿಪಾಲ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ “ಕುರಲ್ – ತುಳು ಸಾಹಿತ್ಯ ಸಾಂಸ್ಕೃತಿಕ ಪರ್ಬ’ ಮಾ.19 ರಂದು ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಮಾಹಿತಿಯನ್ನು ವಿವರಿಸಿದರು.
ಅಂದು ಬೆಳಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ನವೋದಯ ಸಾಂಸ್ಕೃತಿಕ ಕಲಾತಂಡ ಪಾಂಬೂರು ತಂಡದಿಂದ ಡೋಲು ಪ್ರಾತ್ಯಕ್ಷಿಕೆ ನಡೆಯಲಿದೆ.
ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಲೇಖಕ ಪ್ರೊ. ಮುರಳಿಧರ ಉಪಾಧ್ಯಾಯ ಮತ್ತು ಹೆಚ್ಪಿಆರ್ ಗ್ರೂಪ್ಸ್ ಆಫ್ ಇನ್ ಸ್ಟಿಟ್ಯೂಷನಿನ ಅಧ್ಯಕ್ಷ ಹರಿಪ್ರಸಾದ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶ್ರೇಯಸ್ ಕೋಟ್ಯಾನ್, ರಾಘವೇಂದ್ರ ನಾಯ್ಕ್, ಆನಂದ್ ನಾಯ್ಕ್, ವೈಷ್ಣವಿ ಭಂಡಾರ್ಕರ್ ಉಪಸ್ಥಿತರಿದ್ದರು.