ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದ ಮೂರು ಬೋಟುಗಳಿಗೆ ದಂಡ ವಿಧಿಸಲಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಬೋಟುಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರಿಗೆ ತಿಳಿಸಲಾಗಿತ್ತು. ಅವರು ವಿಚಾರಣೆ ನಡೆಸಿ ಬೋಟುಗಳ ಮಾಲಕರಿಗೆ ಒಟ್ಟು 16 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಇನ್ನೊಂದು ಬೋಟ್ನಲ್ಲಿ ಬೆಳಕು ಮೀನುಗಾರಿಕೆ ನಡೆಸಲು ಜನರೇಟರ್ ಅಳವಡಿಸಿರುವುದು ಪರಿಶೀಲನೆಯಲ್ಲಿ ಕಂಡುಬಂದಿದ್ದು ಆ ಬೋಟ್ ನವರಿಗೂ 5 ಸಾವಿರ ರೂ. ದಂಡ ಹಾಕಲಾಗಿದೆ. ಬೋಟುಗಳಲ್ಲಿ ಅಳವಡಿಸಿದ ಜನರೇಟರ್ ಹಾಗೂ ಬೆಳಕು ಮೀನುಗಾರಿಕೆಗೆ ಸಂಬಂಧಿಸಿದ ಲೈಟಿಂಗ್ ಉಪಕರಣಗಳನ್ನು ತೆರವುಗೊಳಿಸಿ ಬೋಟ್ ಅನ್ನು ಬಿಡುಗಡೆಗೊಳಿಸಲಾಗಿದೆ. ನಿಷೇಧಿತ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ಗಳನ್ನು ತಡೆಯಲು ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ವತಿಯಿಂದ ಜಂಟಿಯಾಗಿ ಫೈಯಿಂಗ್ ಸ್ಕ್ಯಾಡ್ ರಚಿಸಿದ್ದು ತಂಡವು ಮಲ್ಪೆ ಹಾಗೂ ಗಂಗೊಳ್ಳಿ ಬಂದರಿನಲ್ಲಿ ನಿರಂತರ ತಪಾಸಣೆ ನಡೆಸುತ್ತಿದೆ.
