Monday, March 2, 2026

spot_img

ಜಿಲ್ಲಾ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ: ತುರ್ತು ಪರಿಸ್ಥಿತಿ ವಿರೋಧಿಸಿ ರಚನೆಯಾದ ಜನತಾ ಪಕ್ಷದ ಸರ್ಕಾರ ಪತನಗೊಂಡ ಸಂದರ್ಭದಲ್ಲಿ ಅಂದಿನ ಜನಸಂದ ನಾಯಕರು ನಡೆದುಕೊಂಡ ರೀತಿ ಅದರ್ಶ ರಾಜಕಾರಣಕ್ಕೆ ಮಾದರಿಯಾಗಿದೆ ಎಂದು ಕಾರ್ಕಳ ಹಿರಿಯ ವಕೀಲ, ಬಿಜೆಪಿ ಮುಖಂಡ ಎಂ.ಕೆ. ವಿಜಯಕುಮಾರ್​ ಹೇಳಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದರು‌.

ಜಿಲ್ಲಾಧ್ಯಕ್ಷ ಕಿಶೋರ್​ ಕುಮಾರ್​ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್​ ಗಂಟಿಹೊಳೆ, ವಿಪ ಸದಸ್ಯ ಕಿಶೋರ್​ ಕುಮಾರ್​ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್​ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles