ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಸಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಮೇ.20ರಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಠಾರದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ಜರುಗಲಿದೆ.
ಈ ಒಂದು ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ತಮ್ಮ ಹೆಸರನ್ನು ನೋಂದಾಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದಲ್ಲಿ ಅದರ ಜೊತೆಯಲ್ಲಿ ತರಬೇಕು. ಹಾಗೂ ಮೊದಲು ನೋಂದಾಯಿಸಿದ 30 ಜನರಿಗೆ ಈ ಸೌಲಭ್ಯವನ್ನು ಬಳಸಿಕೊಳ್ಳಲು ಅವಕಾಶವಿರುತ್ತದೆ. ಈಗಾಗಲೇ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರ ತಂಡ ಈ ವಿಶೇಷ ಶಿಬಿರದಲ್ಲಿ ಪಾಲ್ಗೂಳುತ್ತಿದ್ದು ಈಶ್ವರ್ ಮಲ್ಪೆ ಟೀಮ್ ವತಿಯಿಂದ ಶೇ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಮೊಬೈಲ್ ನಂ 9902344399 ಅನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.