ಕುಂದಾಪುರ : ಕರ್ನಾಟಕ ಸರಕಾರ ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ಸೋಮೇಶ್ವರ ಅಭಯಾರಣ್ಯ ಆಗುಂಬೆ ವನ್ಯಜೀವಿ ವಲಯ ಅಮಾಸೆಬೈಲು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಪೂರ್ವ ಪ್ರಾಥಮಿಕ ಶಾಲಾ ಆವರಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ RFO ರೂಪೇಶ್, ಹಾಗೂ ಅಮಾಸೆಬೈಲು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಮಲ್ಲಿಕಾ ಕುಲಾಲ್, ಸದಸ್ಯರಾದ ಸುಮತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ರಟ್ಟಾಡಿ, ಡಿ.ಡಿ.ಪಿ. ಅಶೋಕ ಕಾಮತ್, ಕೋಟೇಶ್ವರ ಗೀತಾನಂದಾ ಫೌಂಡೇಶನ್ ಅಧ್ಯಕ್ಷರಾದ ಶಂಕರ್ ಐತಾಳ್, ಶಾಲಾ ಮುಖ್ಯೋಪಾಧ್ಯಾಯರಾದ ಶಶಿಧರ್ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಕೇಶ್ ಭಂಡಾರಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು, ಶಾಲಾ ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಪುಟಾಣಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



