Friday, July 4, 2025

spot_img

ಎಸ್.ಎಸ್.ಎಲ್.ಸಿ ಪರೀಕ್ಷೆ-3 : ಪ್ರತಿಬಂಧಕಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 5 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ, ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರ ಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಮುಚ್ಚಬೇಕು. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಅನಿವಾರ್ಯ ಸಂದರ್ಭಗಳಲ್ಲಿ ಸಂವಹನಕ್ಕಾಗಿ ಬೇಸಿಕ್ ಮೊಬೈಲ್ ಫೋನ್ ಬಳಸಲು ಅನುಮತಿ ನೀಡಲಾಗಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ಅನ್ನು ನಿಷೇಧಿಸಲಾಗಿದೆ.
ಟ್ಯಾಬ್ಲೆಟ್, ಪೆನ್‌ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಇನ್ನಿತರೆ ಯಾವುದೇ ಉಪಕರಣಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಕೊಂಡೊಯ್ಯುವಂತಿಲ್ಲ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles