ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಅವರ ಕಚೇರಿಯಲ್ಲಿ ಭೇಟಿಯಾದರು.

ಬಳಿಕ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿಯವರ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪನವರಿಗೆ ಮನವಿ ಸಲ್ಲಿಸಿದರು.