ಉಡುಪಿ: ಮುಂಜಾನೆ ಎರಡು ಗಂಟೆ ಸುಮಾರಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಿಸಿದಾಗ ಹಲ್ಲೆಗೆ ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಉಡುಪಿ, ಕೊಡವೂರು ಗ್ರಾಮದ ಜುಮಾದಿ ನಗರದ ಸಾಗರ್(25) ಬಂಧಿತ ವ್ಯಕ್ತಿ. ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನ್ನ ಗಮನಿಸಿದ ಮಹಿಳಾ ಪೊಲೀಸ್ ಅಧಿಕಾರಿ ಸಾಗರ್ ನನ್ನು ವಿಚಾರಿಸಿದ್ದಾರೆ. ಈ ವೇಳೆ ವಾಗ್ವಾದ ನಡೆಸಿ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿದ್ದಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈತನ ವಿರುದ್ಧ ಪ್ರಕರಣದ ದಾಖಲಾಗಿದೆ.