Tuesday, March 3, 2026

spot_img

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

ಉಡುಪಿ : ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿದೆ ಎಂದ ಅವರು, ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ ಆಕರ್ಷಕ ಕವಾಯತು ನಡೆಯಲಿದ್ದು, ತರಬೇತಿಗೆ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles