ಬ್ರಹ್ಮಾವರ : ಸರ್ಕಾರಿ ಹಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಮಾಸೆಬೈಲು ಪೊಲೀಸ್ ರು ಬಂಧಿಸಿದ್ದಾರೆ. ನಾರಾಯಣ ನಾಯ್ಕ(43) ಬಂಧಿತ ಆರೋಪಿ.

ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಆಮ್ರಕಲ್ಲು ಎಂಬಲ್ಲಿ ಸರ್ಕಾರಿ ಹಾಡಿಯಲ್ಲಿ ಆರೋಪಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ ಹಿನ್ನಲೆಯಲ್ಲಿ ಪರಿಶೀಲಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ 70 ಮದ್ಯದ ಟೆಟ್ರಾ ಪ್ಯಾಕ್, ನಗದು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


