ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉಡುಪಿ ಜಿಲ್ಲಾ ಮಟ್ಟದ ಎಂ.ಆರ್. ಪಿ ತರಬೇತಿ ಕಾರ್ಯಗಾರವು ಇಂದು ನಗರದ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಗಾರವನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿಸಿ ಮಾತನಾಡಿ, ಇದು ಜಾತಿಗಣತಿಯಲ್ಲ ಕರ್ನಾಟಕದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ ಗತಿಯ ಸಮೀಕ್ಷೆಯಾಗಿದೆ. ಸಮೀಕ್ಷೆಯನ್ನು ಯಶಸ್ವಿಗೊಳಿಸುವಲ್ಲಿ ತರಬೇತಿದಾರರ ಪಾತ್ರ ಪ್ರಮುಖವಾಗಿದ್ದು, ಜಿಲ್ಲಾ ಮಟ್ಟದ ಮಾಸ್ಟರ ಟ್ರೈನರ್ಸ್ ಸರಿಯಾದ ತರಬೇತಿ ಪಡೆದು ಗಣತಿದಾರರಿಗೆ ಸರಿಯಾಗಿ ತರಬೇತಿ ನೀಡುವಂತೆ, ಆ ಮೂಲಕ ಸರಿಯಾದ ನಿಖರವಾದ ಮಾಹಿತಿಯನ್ನು ಸಮೀಕ್ಷೆಯಲ್ಲಿ ದಾಖಲಿಸಿ ಸಮೀಕ್ಷೆ ಯಶಸ್ವಿಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮೀಕ್ಷೆಯ ನೋಡಲ್ ಅಧಿಕಾರಿ ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ಗಳು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


