Thursday, October 23, 2025

spot_img

ಮಲ್ಪೆಯಲ್ಲಿ ಬೀಚ್ ನಲ್ಲಿ ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನಾಚರಣೆ

ಉಡುಪಿ : ವಿಶ್ವಾದ್ಯಂತ ಪ್ರತೀವರ್ಷ ಅಂತರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು ಇಂದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಕರಾವಳಿಯ ಪ್ರಮುಖ ಸಮುದ್ರ ತೀರ ಪ್ರದೇಶಗಳಾದ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ, ಕೋಡಿ, ತ್ರಾಸಿ-ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೀಚ್ ಸ್ವಚ್ಚತಾ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಲ್ಪೆ ಕಡಲತೀರದಲ್ಲಿ ಜಿಲ್ಲೆಯ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ವಿದ್ಯಾರ್ಥಿಗಳು, ವಿವಿಧ ಸಂಘಟನೆಯ ಸದಸ್ಯ್ರರೊಂದಿಗೆ ಸ್ವತಃ ತಾವೇ ಕಸವನ್ನು ಸಂಗ್ರಹಿಸುವುದರ ಮೂಲಕ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪರಿಸರ ಜಾಗೃತೆಯುಳ್ಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಿ, ಪ್ಲಾಸ್ಟಿಕ್ ಬಳಸದಂತೇ ಪ್ರಮಾಣವಚನ ಭೋಧಿಸಿ ಮಾತನಾಡಿ ನಾವೆಲ್ಲರೂ ನಮ್ಮ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ನಮ್ಮ ಸುತ್ತಮುತ್ತದ ನೈರ್ಮಲ್ಯ ಸ್ವಚ್ಚವಾಗಿದ್ದಲ್ಲಿ ಮಾತ್ರ ನಾವುಗಳು ಉತ್ತಮ ಆರೋಗ್ಯ ಹೊಂದಲು ಸಾಧ್ಯ, ಇದಕ್ಕೆ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಗಂಗಾಧರ್ ಹಾಗೂ ಮಾಹೆಯ ವಿದ್ಯಾರ್ಥಿಗಳು, ನಗರಸಭಾ ಸ್ವಚ್ಚತಾ ಕರ್ಮಿಗಳು, ವಿದ್ಯಾರ್ಥಿಗಳು, ಕೆನರಾ ಬ್ಯಾಂಕ್ ಸಿಬ್ಬಂದಿಗಳು, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles