ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ. ಸಿ ವೇಣುಗೋಪಾಲ ಅವರು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ ಬಾಬು ಶೆಟ್ಟಿ, ಅಭಿಲಾಷ್ ಪಿ.ವಿ, ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಶಾಲು ಹೊದಿಸಿ ದೇವಿಯ ಸ್ಮರಣಿಕೆ ನೀಡಿ ಗೌರವಿಸಿದರು.

ಈ ವೇಳೆ ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಮತ್ತಿತತರು ಉಪಸ್ಥಿತರಿದ್ದರು.