Thursday, October 23, 2025

spot_img

ಶಾಸ್ತಿ ಆಗುವ ಈ ಸಂಕಲ್ಪವನ್ನ ನಾವು ನಮ್ಮ ಕಾರ್ಯಾಲಯದಲ್ಲಿ ಮಾಡಬೇಕು: ಬಿ.ಎಲ್ ಸಂತೋಷ್

ಉಡುಪಿ : ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸವನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ನೆರವೇರಿಸಿದರು.

 ಬಳಿಕ ನಡೆದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ದೇಶದ ಗಮನಸೆಳೆದಿದ್ದ ಧರ್ಮಸ್ಥಳ ಗ್ರಾಮದ ಶವಹೂತ ಪ್ರಕರಣದ ಕುರಿತು ಮೊದಲ ಬಾರಿ ಪ್ರತಿಕ್ರಿಯೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮೇಲೆ ವೈಚಾರಿಕ ಆಕ್ರಮಣ ನಡೆದಿದೆ. ಮೂರು ವರ್ಷದ ಹಿಂದೆ ಉಡುಪಿ ಕೃಷ್ಣಮಠದ ಮೇಲು ಆಕ್ರಮಣ ನಡೆದಿತ್ತು, ಸ್ವಲ್ಪ ದಿನದಲ್ಲಿ ಮೂಡುಬಿದರೆ ಮೇಲೆ ಆಕ್ರಮಣ ನಡೆಯುತ್ತದೆ. ಹುಲಿಗೆ ರಕ್ತದ ರುಚಿ ಸಿಕ್ಕಿದೆ. ವೈಚಾರಿಕ ರಾಜಕೀಯದ ಮೂಲಕ ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದ್ದರು. ಈಶ ಆಶ್ರಮ, ಶನಿ ಸಿಂಗಾಪುರದಲ್ಲೂ ರಕ್ತದ ರುಚಿ ನೋಡಿದ್ದರು. ಧರ್ಮಸ್ಥಳದಲ್ಲಿ ರಕ್ತದ ರುಚಿ ನೋಡುವ ಕೆಲಸ ಮಾಡುತ್ತಲೇಯಿದ್ದಾರೆ. ಹೀಗಾಗಿ ಈಗಾಗಲೇ ನಡೆದಿರುವ ಆಕ್ರಮಣಕ್ಕೆ ಶಿಕ್ಷೆ ಆಗಬೇಕು.ಮಾಡುತ್ತಿರುವ ಅಪಪ್ರಚಾರಕ್ಕೂ ಶಾಸ್ತಿ ಆಗಬೇಕು. ಶಾಸ್ತಿ ಆಗುವ ಈ ಸಂಕಲ್ಪವನ್ನ ನಾವು ನಮ್ಮ ಕಾರ್ಯಾಲಯದಲ್ಲಿ ಮಾಡಬೇಕು ಎಂದು ಬಿ.ಎಲ್ ಸಂತೋಷ್ ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇದು ವ್ಯಕ್ತಿ ಅಥವಾ ಸಂಸ್ಥೆಗೆ ನಡೆದ ಆಕ್ರಮಣ ಅಲ್ಲ. ನಮ್ಮ ಶ್ರದ್ದೆ, ನಂಬಿಕೆ, ವಿಷಯದ ಮೇಲೆ ಮಾಡಿರುವ ಅಕ್ರಮಣ ಇದು. ಉಡುಪಿ ಮೇಲೆ ಆಕ್ರಮಣ ಯಾಕೋ ಈಗ ಬಿಟ್ಟು ಬಿಟ್ಟಿದ್ದಾರೆ. ಮತ್ತೆ ಆಕ್ರಮಣ ಪಿಕ್ ಅಪ್ ಮಾಡ್ತಾರೋ ಗೊತ್ತಿಲ್ಲ. ಹಿಂದುಗಳ ಶ್ರದ್ದೆಯ ವಿಚಾರ ಮತ್ತು ಕೇಂದ್ರದ ಮೇಲೆ ದಾಳಿ ನಡೆಯುತ್ತಿದೆ.‌ ಗೋವು, ಕುಟುಂಬ ವ್ಯವಸ್ಥೆ, ಮೌಲ್ಯಗಳು ತೀರ್ಥಕ್ಷೇತ್ರಗಳು ಇವರ ಟಾರ್ಗೆಟ್‌ ಕುಂಭಮೇಳದ ಮೇಲೆ ನಿರಂತರ ಅಪಪ್ರಚಾರ ನಡೆಯಿತು. ಕುಂಭಮೇಳಕ್ಕೆ ಹೋದರೆ ಜಗತ್ತಲ್ಲಿ ಇಲ್ಲದ ಕಾಯಿಲೆ ಬರುತ್ತದೆ ಎಂದು ಹೇಳಿದರು. ದೇಶದ ನಂಬಿಕೆ ಬಹಳ ಗಟ್ಟಿಯಾಗಿದೆ. ಆರೋಪ ಬಂದ ಮೇಲೆ ಕೋಟ್ಯಾಂತರ ಭಕ್ತರು ಸಂಖ್ಯೆ ಜಾಸ್ತಿ ಆಯ್ತು.‌ನಾವು ಸವಾಲನ್ನು ಎದುರಿಸುತ್ತೇವೆ ನಮ್ಮ ಸಮಾಜ ಸಶಕ್ತವಾಗಿದೆ.‌ದೇಶ ಮತ್ತು ಸಂಸ್ಕೃತಿಗೆ ಹಾಕಿರುವ ಸವಾಲಿಗೆ ಮುಟ್ಟಿ ನೋಡುವಂತೆ ಉತ್ತರ ಕೊಡುತ್ತೇವೆ.

ಬಿ.ಎಲ್ ಸಂತೋಷ್  (ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles