ಉಡುಪಿ: ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಜ್ಯ ಸರಕಾರ ಕ್ರೀಡಾ ಮಾನ್ಯತೆ ನೀಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕ್ರೀಡಾ ಪ್ರಾಧಿಕಾರದದಲ್ಲಿ ಕಂಬಳಕ್ಕೆ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ, ರಾಜ್ಯ ಕಂಬಳ ಅಸೋಸಿಯೇಷನ್ ನ ಮೂರು ವರ್ಷದ ಅವಧಿಗಾಗಿ ಪ್ರಥಮ ಅಧ್ಯಕ್ಷರನ್ನಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಕಂಬಳ ಅಸೋಸಿಯೇಷನ್ ನಲ್ಲಿ ಹದಿನೇಳು ಸಮಿತಿ ಸದಸ್ಯರು ಹಾಗೂ ಮೂವರು ವಿಶೇಷ ಗೌರವ ಸಲಹೆಗಾರನ್ನು ಆಯ್ಕೆ ಮಾಡಲಾಗಿದೆ. ಗೌರವ ಸಲಹೆಗಾರರಾಗಿ ಡಾ. ಜೀವೆಂಧರ್ ಬಲ್ಲಾಳ್, ಜೀವನ್ ದಾಸ್ ಅಡ್ಯಾಂತರು, ಕೆ.ಗುಣಪಾಲ್ ಕಡಬ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉಪಾಧ್ಯಕ್ಷರಾಗಿ ನವೀನ್ ಚಂದ್ರ ಆಳ್ವ, ಕಾರ್ಯದರ್ಶಿಯಾಗಿ ವಿಜಯ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಂದ್ರಹಾಸ್ ಸನಿಲ್, ಲೋಕೇಶ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಪಿ.ಆರ್. ಶೆಟ್ಟಿ, ಭಾಸ್ಕರ್ ಎಸ್. ಕೋಟ್ಯಾನ್, ರೋಹಿತ್ ಕುಮಾರ್ ಹೆಗ್ಡೆ, ಶ್ರೀಕಾಂತ್ ಭಟ್, ಶಾಂತರಾಮ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಪಿಯೂಸ್ ಎಸ್. ರೊಡ್ರಿಗಸ್, ಉದಯಕುಮಾರ್ ಶೆಟ್ಟಿ, ಸುಧಾಕರ್ ಹೆಗ್ಡೆ, ಅನಿಲ್ ಶೆಟ್ಟಿ, ಪ್ರಶಾಂತ್ ಕಾಜವ ಹಾಗೂ ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
