ಉಡುಪಿ : ಬೆಳಪು ಗ್ರಾಮದ ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶಿರ್ವ ಪೊಲೀಸ್ ರು ಬಂಧಿಸಿದ್ದಾರೆ. ಅಭಿಷೇಕ್ ಪಾಲನ್(30), ಆರ್.ಶಾಶ್ವತ್(24) ಬಂಧಿತ ಆರೋಪಿಗಳು.

ಕಾಪು ತಾಲೂಕು ಬೆಳಪು ಗ್ರಾಮದ ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಆರೋಪಿಗಳು ಪೊಲೀಸ್ ರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು, ಆರೋಪಿಗಳ ಬಳಿ ಇದ್ದ ಐದು ಸಾವಿರ ರೂಪಾಯಿ ಮೌಲ್ಯದ 115.44 ಗ್ರಾಂ ಗಾಂಜಾ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಶಿರ್ವಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
