ಉಡುಪಿ : ವಿದ್ಯುತ್ ಆಘಾತದಿಂದ ಬೈಲೂರಿನ ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲಕ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಹೊಲೋ ಬ್ಲಾಕ್ ಫ್ಯಾಕ್ಟರಿಯ ಮಾಲಕ ಸುನಿಲ್ ಸೋನ್ಸ್ (45) ಮೃತಪಟ್ಟವರು.

ಬೈಲೂರಿನಲ್ಲಿ ಕಳೆದ 22 ವರ್ಷಗಳಿಂದ ಸುನಿಲ್ ಅವರು ಸುನೀತಾ ಹೊಲೋ ಬ್ಲಾಕ್ ನಡೆಸುತ್ತಿದ್ದು, ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿದೆ. ತಕ್ಷಣ ಸ್ಥಳೀಯರು ಮಣಿಪಾಲ ಸುನಿಲ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ, ಆದರೆ ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು, ಸುನೀಲ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.