Wednesday, October 22, 2025

spot_img

ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ

ಕುಂದಾಪುರ : ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಪ್ರೊ ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಹೇಳಿದರು.ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮೀಸಲಾತಿಯನ್ನು ಬಳಸಿಕೊಂಡು ಉದ್ಯೋಗ ಪಡೆಯುವಂತೆ ಪ್ರೇರೆಪಿಸಿದರು.

 ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜೀವನ ಕುಮಾರ್ ಶೆಟ್ಟಿ ಮಾತನಾಡಿ ಜನತಾ ವಿದ್ಯಾ ಸಂಸ್ಥೆ ಅನೇಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ನೀಡಿದೆ ಆ ಮೂಲಕ ಜನತಾ ಕಾಲೇಜು ರಾಜ್ಯ ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಹೆಜ್ಜೆ ಗುರುತು ಮೂಡಿಸಿದೆ ಎಂದರು. ಕಾರ್ಯಕ್ರಮದಲ್ಲಿ ಕ್ರೀಡಾಪಟು ಸಚಿನ್ ಸುವರ್ಣ ರನ್ನು ಸನ್ಮಾನಿಸಲಾಯಿತು.

 ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಕುಂದಾಪುರ ತಾಲ್ಲೂಕನ್ನು ಪ್ರತಿನಿಧಿಸಿದ ಜನತಾ ಪಿಯು ಕಾಲೇಜ್ ಹೆಮ್ಮಾಡಿ -ಪ್ರಥಮ ಸ್ಥಾನ ಪಡೆದರೆ, ಹೆಬ್ರಿ ತಾಲ್ಲೂಕನ್ನು ಪ್ರತಿನಿಧಿಸಿದ ಕೆ ಪಿ ಎಸ್ ಪಿಯು ಮುನಿಯಲು ದ್ವಿತೀಯ ಸ್ಥಾನ. ಬಾಲಕಿಯರ ವಿಭಾಗದಲ್ಲಿ ಉಡುಪಿ ತಾಲ್ಲೂಕು (ಸರಕಾರಿ ಪಿಯು ಕಾಲೇಜು ಉಡುಪಿ) ಪ್ರಥಮ, ಕಾರ್ಕಳ ತಾಲ್ಲೂಕು (ಎಸ್. ವಿ. ಟಿ. ಪಿಯು ಕಾಲೇಜ್ ಕಾರ್ಕಳ ದ್ವಿತೀಯ ಸ್ಥಾನ ಪಡೆಯಿತು.

 ಸಭೆಯಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸುಕೇಶ್ ಕುಮಾರ್ ಶೆಟ್ಟಿ ಹೊಸ್ಮಠ,ಕುಂದಾಪುರ ತಾಲ್ಲೂಕು ಕ್ರೀಡಾ ಸಂಯೋಜಕರಾದ ರಾಮ್ ಶೆಟ್ಟಿ, ಬೈಂದೂರು ತಾಲ್ಲೂಕು  ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ.ಜನತಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ನಾಯ್ಕ ಸ್ವಾಗತಿಸಿ, ಆಂಗ್ಲಭಾಷ ಉಪನ್ಯಾಸಕಿ ಪ್ರಿಯಾoಕ ವಂದಿಸಿ, ಉಪನ್ಯಾಸಕ ಅಲ್ತಾರು ನಾಗರಾಜ್ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles