ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಚಿರತೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರು ನಂಚಾರ್‌ನ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಭಾಸ್ಕರ್ ಶೆಟ್ಟಿ ತಮ್ಮ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಅಕಸ್ಮಾತ್ ಚಿರತೆಯೊಂದು ರಸ್ತೆಗೆ ಅಡ್ಡ ಬಂದಿತು. ನಿಯಂತ್ರಣ ತಪ್ಪಿದ ಸವಾರ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಪಲ್ಟಿಯಾಗಿ ಬಿದ್ದಿತು.

ಡಿಕ್ಕಿಯ ರಭಸಕ್ಕೆ ಚಿರತೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಗಂಭೀರ ಗಾಯಗೊಂಡ ಭಾಸ್ಕರ್ ಶೆಟ್ಟಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮೃತ ಚಿರತೆಯನ್ನು ಪರಿಶೀಲಿಸಿದರು. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.