Monday, March 2, 2026

spot_img

ವಿಶ್ವ ಆರೈಕೆದಾರರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಆಶಾ ನಿಲಯ ವಿಶೇಷ ಶಾಲೆ ಉಡುಪಿ ಮತ್ತು ಅಂಗವಿಕಲರ ಗ್ರಾಮೀಣ ಮತ್ತು ನಗರ ಪುನರ್ವಸತಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ನಡೆದ ವಿಶ್ವ ಆರೈಕೆದಾರರ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿ, ಆರೈಕೆದಾರರಿಗೆ ಸರಿಯಾದ ಮಾಹಿತಿಯನ್ನು ನೀಡಿದ್ದಲ್ಲಿ ವಿಶೇಷಚೇತನರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದರು.

 ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಆರೈಕೆದಾರರಿಗಿರುವ ಪ್ರೋತ್ಸಾಹಧನದ ಬಗ್ಗೆ ಮಾಹಿತಿ ನೀಡಿದರು. ಉಡುಪಿ ತಾಲೂಕು ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಧುಸೂಧನ್ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು ಇದರ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ ಭಟ್ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಆಶಾ ನಿಲಯ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಯೂನಿಸ್ ಕ್ರಿಸ್ಟಬೆಲ್, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಗ್ರಾಮೀಣ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು, ನಗರ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳು, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು, ಆಶಾನಿಲಯ ವಿಶೇಷ ಶಾಲೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ವಿಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles