ಉಡುಪಿ: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ನಾಲ್ಕನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ನವೆಂಬರ್ 28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಮಂತ್ರಣ ನೀಡಿರುವ ಹಿನ್ನಲೆಯಲ್ಲಿ ಉದ್ದೇಶಕ್ಕೆ ನರೇಂದ್ರ ಮೋದಿ ಉಡುಪಿ ಭೇಟಿ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.

2008-10ರ ಪರ್ಯಾಯದ ಸಂದರ್ಭದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು 2008ರ ಮೇ 8ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಆಗ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥರು ಅವರನ್ನು ಸನ್ಮಾನಿಸಿದ್ದರು.

ಇದೇ ನವೆಂಬರ್ 28ರಂದು ನಡೆಯಲಿರುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಮೊದಲು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ಬಳಿಕ ಹೊಸದಾಗಿ ನಿರ್ಮಾಣಗೊಂಡ ಗೀತಾ ಮಂದಿರಕ್ಕೂ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.



