Wednesday, March 4, 2026

spot_img

ಕುಂದಾಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಸಂಭ್ರಮ

ಕುಂದಾಪುರ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ, ಕುಂದಾಪುರ ಬಿಜೆಪಿ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಬಿಜೆಪಿ ಕ್ಷೇತ್ರಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು. ಬಿಹಾರದಲ್ಲಿ ಎನ್‌ಡಿಎ ಅಭ್ಯರ್ಥಿಗಳು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಸುದ್ದಿ ಹರಿದಾಡುತ್ತಿದ್ದಂತೆಯೇ, ಕುಂದಾಪುರದಲ್ಲಿ ಕಾರ್ಯಕರ್ತರು ಸೇರಿ ವಿಜಯೋತ್ಸವಕ್ಕೆ ಆಚರಿಸಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಕಾರ್ಯಕರ್ತರು ಹರ್ಷೋದ್ಗಾರ ವ್ಯಕ್ತಪಡಿಸಿದರು.

 ಕಾರ್ಯಕ್ರಮದಲ್ಲಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಕುಂದಾಪುರ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳು ಸತೀಶ್ ಪೂಜಾರಿ ವಕ್ವಾಡಿ ಹಾಗೂ ಸುಧೀರ್ ಕೆ.ಎಸ್., ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಜಿಲ್ಲಾ ಓಬಿಸಿ ಪ್ರಭಾರಿ ಅರುಣ್ ಬಾಣ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ದೇವಾಡಿಗ ಉಪಸ್ಥಿತರಿದ್ದರು.

 ಕುಂದಾಪುರ ಮಂಡಲ ಒಬಿಸಿ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ರೈತ ಮೋರ್ಚಾ ಅಧ್ಯಕ್ಷ ಜಯಶೀಲ ಶೆಟ್ಟಿ, ಯುವ ಮೋರ್ಚಾ ಉಪಾಧ್ಯಕ್ಷ ಸುನಿಲ್ ಖಾರ್ವಿ, ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಕುಂದಾಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿ, ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ,

ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭಾ ಸದಸ್ಯ ಸಂತೋಷ್ ಶೆಟ್ಟಿ, ರಾಘವೇಂದ್ರ ಖಾರ್ವಿ, ಪ್ರಭಾಕರ ವಿ., ಮಾಜಿ ಸದಸ್ಯರು ದಿವಾಕರ ಕಡ್ಗಿ, ಸತೀಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ ಹೇರಿಕುದ್ರು, ರತ್ನಾಕರ ಶೇರಿಗಾರ್, ಒಬಿಸಿ ಕಾರ್ಯದರ್ಶಿ ಪ್ರಶಾಂತ್ ಕುಂದಾಪುರ, ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಮಾಜಿ ಸದಸ್ಯ ಸಂಜೀವ ದೇವಾಡಿಗ, ಕೋಟೇಶ್ವರ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ್ ಕಾಂಚನ್ ಮತ್ತು ಸಂತೋಷ್ ಮೆಂಡನ್, ನವೀನ್ ಪೂಜಾರಿ ಸೇರಿದಂತೆ ಅನೇಕ ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles