Wednesday, March 4, 2026

spot_img

ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

 ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಇದಕ್ಕೆ ಒತ್ತು ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆಯ ಕುರಿತು ಭಿತ್ತಿಪತ್ರ ಹಾಗೂ ಮಕ್ಕಳ ಸಹಾಯವಾಣಿ- 1098 ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳು ನಿಯಮಿತವಾಗಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಆದರೆ 2025 ರ ಏಪ್ರಿಲ್ ನಿಂದ ಜೂನ್ ವರೆಗೆ 146 ಸಭೆಗಳು ನಡೆದಿದ್ದು, ಜುಲೈ ನಿಂದ ಈವರೆಗೆ 116 ಸಭೆಗಳು ಮಾತ್ರ ನಡೆದಿವೆ. ರಕ್ಷಣಾ ಸಮಿತಿಗಳು ಕಾಲಕಾಲಕ್ಕೆ ಸಭೆ ನಡೆಸಿ, ಮಕ್ಕಳ ರಕ್ಷಣಾ ಕ್ರಮಗಳ ಜಾರಿಗೆ ಮುಂದಾಗಬೇಕು.

ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles