Monday, March 2, 2026

spot_img

ಕೊಕ್ಕರ್ಣೆ ಎಣ್ಣೆ ಮಿಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ, ಅಪಾರ ನಷ್ಟ

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೃಹತ್ ಬೆಂಕಿ ಅವಘಡ ಸಂಭವಿಸಿದೆ. ಕೊಕ್ಕರ್ಣೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಭಾಗೀರಥಿ ಎಣ್ಣೆ ಮಿಲ್‌ನಲ್ಲಿ ಸಂಜೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ಕ್ಷಣಗಳಲ್ಲಿ ವೇಗವಾಗಿ ವ್ಯಾಪಿಸಿತು.

 ಫ್ಯಾಕ್ಟರಿಯಲ್ಲಿ ದಾಸ್ತಾನು ಇಟ್ಟ ತೆಂಗಿನ ಎಣ್ಣೆ ಮತ್ತು ಕೊಬ್ಬರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಪ್ಯಾಕ್ಟರಿಯ ಬಹುಭಾಗ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಉಡುಪಿ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. 

ವರದಿಗಳ ಪ್ರಕಾರ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಆರ್ಥಿಕ ನಷ್ಟ ದೊಡ್ಡ ಮಟ್ಟದಲ್ಲಿ ಸಂಭವಿಸಿದೆ. ಅಪಘಟನೆಯ ಕುರಿತು ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles