ಉಡುಪಿ: ಉಡುಪಿಯ ಚಂದು ಮೈದಾನ ಸಮೀಪದ ಬಾಡಿಗೆ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಂಜಯ್ (ಮೃತ) ರಾತ್ರಿ ಮನೆ ಪಕ್ಕದ ಮರಕ್ಕೆ ನೇಣು ಬಿಗಿದುಕೊಂಡಿದ್ದನು. ವಿಷಯ ತಿಳಿದ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತನ ಸಹೋದರ ಪಾಂಡು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



