ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ 14 ಮನೆಗಳ ಗೃಹಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 25, 2025ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಪ್ರವರ್ತಕ ಡಾ.ಎಚ್ ಎಸ್ ಶೆಟ್ಟಿ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಮಾರಂಭದಲ್ಲಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೃಹಪೂಜೆ ನೆರವೇರಿಸಲಿದ್ದು, ಲೋಕಾರ್ಪಣೆ ಹಾಗೂ ಮನೆಗಳ ಹಸ್ತಾಂತರವನ್ನು ಬಿ.ಎಲ್. ಸಂತೋಷ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಹಿಸಲಿದ್ದಾರೆ. ವಿವಿಧ ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ ಎಂದರು.


ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ ಟ್ರಸ್ಟ್ ಕೊರಗರಿಗೆ 100 ಮನೆಗಳ ನಿರ್ಮಾಣ ಸಂಕಲ್ಪದಡಿ ಈಗಾಗಲೇ ಹಲವು ಮನೆಗಳನ್ನು ಹಂಚಿಕೆ ಮಾಡಿದ್ದು, ಈ ಹಂತದಲ್ಲಿ ಮತ್ತೊಂದು 14 ಮನೆಗಳನ್ನು ಫಲಾನುಭವಿಗಳಿಗೆ ಒದಗಿಸಲಾಗುತ್ತಿದೆ ಎಂದರು. ಈಸಂದರ್ಭ ಟ್ರಸ್ಟ್ ಪದಾಧಿಕಾರಿಗಳು, ಸ್ಥಳೀಯ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.



