Monday, March 2, 2026

spot_img

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ :45.80 ಲಕ್ಷ ರೂ. ಮೌಲ್ಯದ ಒಡವೆ ನಾಪತ್ತೆ..!

ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ.

ಮುಂಬೈ ಚೆಂಬೂರು ನಿವಾಸಿ ಹೆಲ್ಮೀನಾ ಸಾಲಿನ್ಸ್ ಅವರು ತಮ್ಮ ಪತಿ, ಮಗಳು ಹಾಗೂ ಮೊಮ್ಮಗಳೊಂದಿಗೆ ಡಿಸೆಂಬರ್ 26ರಂದು ಮಧ್ಯಾಹ್ನ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಉಡುಪಿಗೆ ಪ್ರಯಾಣಿಸುತ್ತಿದ್ದರು. ಚಿನ್ನಾಭರಣಗಳನ್ನು ಇರಿಸಿದ್ದ ವ್ಯಾನಿಟಿ ಬ್ಯಾಗ್ ಅನ್ನು ಅವರು ರಾತ್ರಿ ಮಲಗುವ ವೇಳೆ ತಲೆಯ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಡಿಸೆಂಬರ್ 27ರಂದು ಬೆಳಗ್ಗೆ ಸುಮಾರು 6.10ರ ವೇಳೆಗೆ ರೈಲು ಮುರ್ಡೇಶ್ವರ ರೈಲು ನಿಲ್ದಾಣದ ಸಮೀಪದಲ್ಲಿದ್ದಾಗ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ 408 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 15 ಸಾವಿರ ರೂಪಾಯಿ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣಗಳ ಮೌಲ್ಯ ಸುಮಾರು 45 ಲಕ್ಷ 80 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.

ಕಳ್ಳತನ ನಡೆದ ನಿಖರ ಸಮಯ ಹಾಗೂ ಸ್ಥಳ ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಸಹ ಪ್ರಯಾಣಿಕರು ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles