ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ವತಿಯಿಂದ ನೀಡಲಾಗುವ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರ–2026ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ, ನಟ, ನಾಟಕಕಾರ ಮತ್ತು ಸಾಹಿತಿ ಟಿ.ಎನ್. ಸೀತಾರಾಂ ಆಯ್ಕೆಯಾಗಿದ್ದಾರೆ.

ಜನವರಿಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂ. ಗೌರವಧನದೊಂದಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ರವಿರಾಜ್ ಹೆಚ್.ಪಿ. ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಶಸ್ತಿ ಸಮಿತಿ ಸಂಚಾಲಕ ಜನಾರ್ದನ ಕೊಡವೂರು ಹಾಗೂ ಉಪಾಧ್ಯಕ್ಷ ಮಧುಸೂದನ ಹೇರೂರು ಉಪಸ್ಥಿತರಿದ್ದರು.



