Monday, March 2, 2026

spot_img

ಬ್ರಹ್ಮಾವರ ಮಹೇಶ್ ಆಸ್ಪತ್ರೆ ಎದುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದ ಕೋಟ ಪರಿಶೀಲನೆ..

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಮಹೇಶ್ ಆಸ್ಪತ್ರೆ ಎದುರು ರಾಷ್ಟ್ರೀಯ ಹೆದ್ದಾರಿ–66 ಸಂಬಂಧಿತ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಕಾಮಗಾರಿಗಳ ಗುಣಮಟ್ಟ, ಸಾರ್ವಜನಿಕರ ಸಂಚಾರಕ್ಕೆ ಉಂಟಾಗುವ ಅಡಚಣೆಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದರು ಚರ್ಚೆ ನಡೆಸಿದರು.

ಸ್ಥಳೀಯ ನಾಗರಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಹಾಗೂ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಬಿ.ಆರ್., ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles