Tuesday, March 24, 2026

spot_img

ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ, ಬಂಧನ..

ಉಡುಪಿ : ಕಾರ್ಕಳ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳನೊಬ್ಬ ಬೀಗ ಮುರಿದು ಒಳನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 ಜನವರಿ 16 ರಂದು ಸೊಸೈಟಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನ ನಡೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ ಸುರೇಶ್‌ ಕೊರಗ ಪೂಜಾರಿ (53)  ಎಂಬುದು ಖಚಿತಗೊಂಡ ಹಿನ್ನಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

 ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ವಿರುದ್ಧ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ ಸೇರಿದಂತೆ ಗೋವಾ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles