Monday, March 2, 2026

spot_img

ಕುಂದಾಪುರದಲ್ಲಿ ಖಾಸಗಿ ಬಸ್–ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಮೃತ್ಯು..

ಉಡುಪಿ : ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರೊಬ್ಬರು ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಮೃತರನ್ನು ಸೌಕೂರು ನಿವಾಸಿ ವಿಜಯ್‌ (36) ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕಿನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ವೊಂದನ್ನು ಓವರ್‌ಟೇಕ್ ಮಾಡುವ ವೇಳೆ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್‌ಗೆ ಬೈಕ್‌ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ತೀವ್ರತೆಗೆ ವಿಜಯ್‌ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles