Wednesday, March 25, 2026

spot_img

ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟೆಂಪೋ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪರ್ಕಳ ಸಮೀಪದ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಕಾರ್ಖಾನೆ ಬಳಿಯಲ್ಲಿ ಮಧ್ಯಾಹ್ನ ನಡೆದಿದೆ.

ಮೃತರನ್ನು ಹೆರ್ಗಾ ಗ್ರಾಮದ ಭಾಸ್ಕರ್ ನಾಯಕ್ (70) ಎಂದು ಗುರುತಿಸಲಾಗಿದೆ. ಟೆಂಪೋ ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles