Tuesday, March 24, 2026

spot_img

ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ರೌಡಿಸಂ ಪದಬಳಕೆ, ರಘುಪತಿ ಭಟ್ ಕ್ಷಮೆಯಾಚಿಸಲಿ: ದಿನೇಶ್ ಅಮೀನ್ ಆಗ್ರಹ

ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ರಾಜಕೀಯ ಹತಾಶೆಯಿಂದ ಮಾಜಿ ಶಾಸಕ ರಘುಪತಿ ಭಟ್ ಮಾಡಿರುವ ಆಧಾರರಹಿತ ಆರೋಪಗಳನ್ನು ತಕ್ಷಣ ಹಿಂಪಡೆದು ಬೇಷರತ್ ಕ್ಷಮೆಯಾಚಿಸಬೇಕು ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಆಗ್ರಹಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಾನಿಡಿಯೂರು ಗ್ರಾಮದಲ್ಲಿರುವ ರಘುಪತಿ ಭಟ್ ಅವರ ಖಾಸಗಿ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ತಪ್ಪು ಮಾಹಿತಿ ನೀಡಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿರುವ ಬಗ್ಗೆ ಸ್ಥಳೀಯ ಯುವಕ ಮಂಡಳಿ ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಘುಪತಿ ಭಟ್ ರಾಜಕೀಯ ಪ್ರೇರಿತವಾಗಿ ಸುಳ್ಳು ಆರೋಪ ಮಾಡಿ ಶಾಸಕರ ತೇಜೋವಧೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿದರು. ಹಿಂದುಳಿದ ವರ್ಗದ ಸಾಮಾನ್ಯ ಕಾರ್ಯಕರ್ತನೊಬ್ಬ ಶಾಸಕನಾಗಿ ಬೆಳೆಯುವುದನ್ನು ರಘುಪತಿ ಭಟ್ ಒಪ್ಪಿಕೊಳ್ಳಲು ಮನಸ್ಥಿತಿ ಇಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿ ಜನಬೆಂಬಲದಿಂದ ಗೆದ್ದ ಯಶ್ ಪಾಲ್ ಸುವರ್ಣ ಅವರ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು.ಉಡುಪಿ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನಗಳ ಕೊರತೆಯ ನಡುವೆಯೂ ಶಾಸಕರು ಹಗಲಿರುಳು ಶ್ರಮಿಸುತ್ತಿದ್ದು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ರಾಷ್ಟ್ರೀಯತೆ ಮತ್ತು ಹಿಂದುತ್ವದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಪಕ್ಷದಿಂದ ಮೂರು ಬಾರಿ ಶಾಸಕರಾಗಿ ಅಧಿಕಾರ ಅನುಭವಿಸಿದ ರಘುಪತಿ ಭಟ್, ಕಳೆದ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ವಿರುದ್ಧ ನಡೆದುಕೊಂಡಿದ್ದಾರೆ. ಇಂತಹ ವ್ಯಕ್ತಿಗೆ ಪಕ್ಷನಿಷ್ಠೆ ಹಾಗೂ ಶಾಸಕರ ಕಾರ್ಯವೈಖರಿ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.ಶಾಸಕರ ವಿರುದ್ಧ ‘ರೌಡಿಸಂ’ ಎಂಬ ಪದ ಬಳಸಿ ಆರೋಪ ಮಾಡಿರುವುದು ಅಸಂಬದ್ಧ. ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಆಧಾರರಹಿತವಾಗಿದ್ದು, ಸಮಾಜದ ಮುಂದೆ ಶಾಸಕರನ್ನು ತಪ್ಪಾಗಿ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜು ಕುಲಾಲ್, ಜಗದೀಶ್ ಆಚಾರ್ಯ, ಪ್ರದೀಪ್ ಹೊನ್ನಾಳ, ಶ್ರೀವತ್ಸ ಹಾಗೂ ಮನೋಜ್ ಶೆಟ್ಟಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles