Sunday, March 29, 2026

spot_img

ಜಾನುವಾರು ಕಳ್ಳತನ ಪ್ರಕರಣ: ಕೋಕಾ ಕಾಯಿದೆ ಅಡಿ ಮೂವರು ಮತ್ತೆ ಬಂಧನ

ಉಡುಪಿ: ಕಾರ್ಕಳ ತಾಲೂಕು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅನ್ವಯಿಸಿ ಮೂವರನ್ನು ಮತ್ತೆ ಬಂಧಿಸಲಾಗಿದೆ. ಮೊಹಮ್ಮದ್ ಯೂನಿಸ್ (31), ಮೊಹಮ್ಮದ್ ಇಕ್ಬಾಲ್ @ ಇಕ್ಕು (29) ಹಾಗೂ ನಾಸಿರ್ @ ಮೊಹಮ್ಮದ್ ನಾಸಿರ್ (28) ಬಂಧಿತರು.

 2025 ಸೆಪ್ಟಂಬರ್‌ 29ರಂದು ರಾತ್ರಿ ಸುಮಾರು 2.15 ಗಂಟೆಗೆ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಪ್ರದೇಶದಲ್ಲಿ ಫಿರ್ಯಾದಿದಾರರಾದ ಜಯಶ್ರೀ ಪೂಜಾರಿ ಅವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು, ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದಾಗ, ಮನೆಯವರು ಎಚ್ಚರಗೊಂಡು ಪರಿಶೀಲನೆಗೆ ಇಳಿದಾಗ ತಲವಾರು ತೋರಿಸಿ ಬೆದರಿಕೆ ಹಾಕಿದ್ದರು. ಬಳಿಕ ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ, ಅವುಗಳನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದರು. ಸುಮಾರು ರೂ. 35,000 ರೂಪಾಯಿ ಮೌಲ್ಯದ ಜಾನುವಾರು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಕಾರ್ಕಳ ವೃತ್ತ ನಿರೀಕ್ಷಕರು ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆದರೆ ಮುಂದಿನ ತನಿಖೆಯಲ್ಲಿ ಆರೋಪಿಗಳು ಸಂಘಟಿತವಾಗಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಕೋಕಾ ಕಾಯಿದೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಗಳನ್ನು ಮತ್ತೆ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles