ಉಡುಪಿ : ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಸಂಯೋಜನೆಯಲ್ಲಿ ಉಡುಪಿ ಕಕ್ಕುಂಜೆಯ ಪಾಸ್ಟರಲ್ ಸೆಂಟರ್ ‘ಅನುಗ್ರಹ’ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 132ನೇ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರದ ಸಾಮೂಹಿಕ ವೀಕ್ಷಣೆ ನೆರವೇರಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕೆಥೋಲಿಕ್ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಭಾಗವಹಿಸಿ, ರಾಷ್ಟ್ರೀಯ ವಿಚಾರಗಳ ಕುರಿತಾಗಿ ಪ್ರಧಾನಮಂತ್ರಿಗಳ ಸಂದೇಶವನ್ನು ಆಲಿಸಿದರು. ಈ ಸಂದರ್ಭ ವಿವಿಧ ಅಲ್ಪಸಂಖ್ಯಾತ ಕುಟುಂಬಗಳ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಈ ವೇಳೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ ಉಪಸ್ಥಿತರಿದ್ದರು. ಹಾಗೆಯೇ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಭಾರತೀಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ರಾಜ್ಯ ಕಾರ್ಯದರ್ಶಿ ಜೆಸಲ್ ಡಿಸೋಜ, ನಗರಾಧ್ಯಕ್ಷ ದಿನೇಶ್ ಅಮೀನ್ ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದರು.

ಜಿಲ್ಲಾ ಕೆಥೋಲಿಕ್ ಸಭೆಯ ಅಧ್ಯಕ್ಷ ಮೆಲ್ವಿನ್ ಶಿರ್ವ, ನಿಕಟಪೂರ್ವ ಅಧ್ಯಕ್ಷ ರೊನಾಲ್ಡ್ ಡಿ. ಅಲ್ಮೇಡಾ, ಮಾಜಿ ಅಧ್ಯಕ್ಷ ಸಂತೋಷ್ ಕರ್ನೋಲಿಯೋ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಧರ್ಮಭಗಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ 100ಕ್ಕೂ ಮಿಕ್ಕಿ ಅಲ್ಪಸಂಖ್ಯಾತ ಕುಟುಂಬಗಳ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ‘ಮನ್ ಕೀ ಬಾತ್’ ಜಿಲ್ಲಾ ಸಂಚಾಲಕ ಶಿವಕುಮಾರ್ ಅಂಬಲಪಾಡಿ ನಿರೂಪಿಸಿ, ವಂದಿಸಿದರು.



